
ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ(CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಕಾನ್ಸ್ ಟೇಬಲ್(GD) ಪರೀಕ್ಷೆಯನ್ನು ಮೊದಲ ಬಾರಿಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು.
ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.
ದೇಶದಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆಬ್ರವರಿ 20 ರಿಂದ ಮಾರ್ಚ್ 7, 2024 ರವರೆಗೆ ಪರೀಕ್ಷೆಯನ್ನು ನಡೆಸಲಾಗುವುದು. CAPF GD ಕಾನ್‌ಸ್ಟೆಬಲ್ ಪರೀಕ್ಷೆಯಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಹಾಗೂ ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಪ್ರತಿ ವರ್ಷ ಕಾನ್ಸ್ಟೇಬಲ್ GD ಪರೀಕ್ಷೆಯನ್ನು ನಡೆಸುತ್ತದೆ. ಈ ವರ್ಷ, ಆಯೋಗವು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಗೃಹ ವ್ಯವಹಾರಗಳ ಸಚಿವಾಲಯದೊಂದಿಗೆ ಎಂಒಯುಗೆ ಸಹಿ ಹಾಕಿದೆ.