ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಅರಿಶಿನ ಕುಂಕುಮ ಕಾರ್ಯಕ್ರಮಕ್ಕೆ ಅನುಮತಿ ಪಡೆದು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಲ್ಲದೇ, ಪತಿ ಹಾಗೂ ಸಂಸದರಾದ ಅಣ್ಣಾ ಸಾಹೇಬ ಜೊಲ್ಲೆ ಹೆಸರಲ್ಲಿ ಹಾಡು ರಚಿಸಿ ಅದರಲ್ಲಿ ಬಿಜೆಪಿ ಚಿಹ್ನೆ ಬಳಸಿದ ಕಾರಣಕ್ಕೆ ನಿಪ್ಪಾಣಿಯ ರಣ ರಾಗಿಣಿ ಮಹಿಳಾ ಮಂಡಳದ ಅಧ್ಯಕ್ಷರಾದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ ಅವರು ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆದುಕೊಂಡಿದ್ದರು. ಆದರೆ, ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಹಾಡು ಮತ್ತು ಬಿಜೆಪಿ ಚಿಹ್ನೆ ಬಳಸಲಾಗಿದೆ. ಈ ಹಿನ್ನೆಲೆಯಲ್ಲಿ ಶಶಿಕಲಾ ಜೊಲ್ಲೆ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಅಡಿ ಪ್ರಕರಣ ದಾಖಲಾಗಿದೆ.