10ನೇ ತರಗತಿಯಲ್ಲಿ ಉತ್ತೀರ್ಣ / ಅನುತ್ತೀರ್ಣಗೊಂಡ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರೀಯ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಭಾರಿ / ಲಘು ವಾಹನ ಚಾಲನಾ ಮತ್ತು ತಾಂತ್ರಿಕ ತರಬೇತಿ ನೀಡಲಾಗುತ್ತದೆ.
ಆಸಕ್ತ 18ರಿಂದ 35 ವರ್ಷದ ವಯೋಮಿತಿ ಒಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, 30 ದಿನಗಳ ಈ ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅರ್ಜಿ ಸಲ್ಲಿಸುವವರು ತಮ್ಮ ಅಂಕಪಟ್ಟಿ, 4 ಪಾಸ್ಪೋರ್ಟ್ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಲಘು ವಾಹನ ಚಾಲನಾ ಪರವಾನಿಗೆ ಪ್ರತಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರು, ಕೆಎಸ್ಆರ್ಟಿಸಿ ಕೇಂದ್ರೀಯ ತರಬೇತಿ ಕೇಂದ್ರ, ಕೋಲಾರ ಮುಖ್ಯ ರಸ್ತೆ, ಬಸ್ ಡಿಪೋ ಹತ್ತಿರ, ಮಾಲೂರು -563130 ಇಲ್ಲಿಗೆ ಕಳುಹಿಸಬಹುದಾಗಿದೆ. ಅಥವಾ ಇಮೇಲ್ principalctiksrtc@gmail.com ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.