2023 ನೇ ಸಾಲಿನ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶನಿವಾರದಂದು ಈ ಪರೀಕ್ಷೆಗಳು ಅಂತ್ಯಗೊಂಡಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ 24 ರಿಂದ ಆರಂಭವಾಗುತ್ತಿದೆ.
ರಾಜ್ಯದಾದ್ಯಂತ ಒಟ್ಟು 236 ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದ್ದು, ಪರೀಕ್ಷೆ ಬರೆದಿರುವ 8.42 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ.
ಮೌಲ್ಯಮಾಪನ ಕಾರ್ಯಕ್ಕಾಗಿ 73,000ಕ್ಕೂ ಅಧಿಕ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಫಲಿತಾಂಶವನ್ನು ಕಂಪ್ಯೂಟರಿಕರಣಗೊಳಿಸಲಾಗುತ್ತದೆ. ಆ ಬಳಿಕ ಎಲ್ಲವನ್ನು ಪರಿಶೀಲಿಸಿ ಫಲಿತಾಂಶ ಪ್ರಕಟಣೆಯ ದಿನಾಂಕವನ್ನು ಘೋಷಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಈ ಬಾರಿಯ 10ನೇ ತರಗತಿ ಪರೀಕ್ಷೆ ಮಾರ್ಚ್ 31 ರಿಂದ ಆರಂಭವಾಗಿದ್ದು, ಏಪ್ರಿಲ್ 15ರವರೆಗೆ ನಡೆದಿತ್ತು. ರಾಜ್ಯದಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.