alex Certify SSLC ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪ್ರಸಕ್ತ ಸಾಲಿನ ಎಸ್.ಎಸ್.‌ಎಲ್.‌ಸಿ. ಪರೀಕ್ಷೆ ಮಾರ್ಚ್‌ 28 ರಿಂದ ಆರಂಭವಾಗಿ ಏಪ್ರಿಲ್‌ 11 ರಂದು ಪೂರ್ಣಗೊಂಡಿದೆ. 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ.

ಎಸ್.ಎಸ್.‌ಎಲ್.‌ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಈಗಾಗಲೇ ಆರಂಭವಾಗಿದ್ದು, ರಾಜ್ಯದ 238 ಪರೀಕ್ಷಾ ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ 63 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ ಎನ್ನಲಾಗಿದ್ದು, ಹೀಗಾಗಿ ಮೇ ಎರಡನೇ ವಾರದ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...