alex Certify SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು ಪೂರಕ ಪರೀಕ್ಷೆಗೆ ದಿನಾಂಕವನ್ನು ಸಹ ಘೋಷಿಸಲಾಗಿದೆ. ಜೂನ್ 27 ರಿಂದ ಜುಲೈ 4 ರವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆ ನೋಂದಣಿ ಮತ್ತು ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಮನವಿ ಬಂದ ಹಿನ್ನೆಲೆಯಲ್ಲಿ ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನೋಂದಣಿ ದಿನಾಂಕವನ್ನು ವಿಸ್ತರಿಸಿದೆ.

ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ಜೂನ್ 9, ಪರೀಕ್ಷಾ ಶುಲ್ಕವನ್ನು ನೆಫ್ಟ್ ಮೂಲಕ ಬ್ಯಾಂಕಿಗೆ ಪಾವತಿಸಲು ಜೂನ್ 10 ಹಾಗೂ ವಿದ್ಯಾರ್ಥಿಗಳ ಮಾಹಿತಿಯನ್ನು ಮಂಡಳಿಗೆ ಸಲ್ಲಿಸಲು ಜೂನ್ 14 ಕೊನೆಯ ದಿನಾಂಕವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...