alex Certify SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಮಧ್ಯವಾರ್ಷಿಕದಲ್ಲೂ ‘ಬೋರ್ಡ್’ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಮಧ್ಯವಾರ್ಷಿಕದಲ್ಲೂ ‘ಬೋರ್ಡ್’ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಈ ವರ್ಷ ವಾರ್ಷಿಕ ಪರೀಕ್ಷೆ ಮಾತ್ರವಲ್ಲ, ಮಧ್ಯವಾರ್ಷಿಕ ಪರೀಕ್ಷೆಗೂ ಮಂಡಳಿ ಮಟ್ಟದ ಪ್ರಶ್ನೆ ಪತ್ರಿಕೆ ಉತ್ತರಿಸಬೇಕಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2024ರ ಎಸ್ಎಸ್ಎಲ್ಸಿ ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನೆ ಪತ್ರಿಕೆ ರೂಪಿಸಿ ನೀಡಲು ನಿರ್ಧಾರ ಕೈಗೊಂಡಿದೆ. ಇಷ್ಟು ವರ್ಷ ಕೇವಲ ವಾರ್ಷಿಕ ಪರೀಕ್ಷೆಯನ್ನು ಮಾತ್ರ ಮಂಡಳಿ ನಡೆಸುತ್ತಿತ್ತು. ಮಧ್ಯವಾರ್ಷಿಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುತ್ತಿತ್ತು.

ಆದರೆ, ಈ ವರ್ಷ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕೂಡ ಮಂಡಳಿಯೇ ರೂಪಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆನ್ಲೈನ್ ಮೂಲಕ ಕಳುಹಿಸಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಶ್ನೆ ಪತ್ರಿಕೆ ಮುದ್ರಣ ಮಾಡಿ ಆಯಾ ಶಾಲೆಗಳಿಗೆ ತಲುಪಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...