alex Certify SSLC ಪರೀಕ್ಷೆ-1 : ಅಧಿಕಾರಿಗಳು, ಸಿಬ್ಬಂದಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಶಿಕ್ಷಣ ಇಲಾಖೆಯಿಂದ ʻಮಾರ್ಗಸೂಚಿʼ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ-1 : ಅಧಿಕಾರಿಗಳು, ಸಿಬ್ಬಂದಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಶಿಕ್ಷಣ ಇಲಾಖೆಯಿಂದ ʻಮಾರ್ಗಸೂಚಿʼ ಪ್ರಕಟ

ಬೆಂಗಳೂರು : 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತ ಮಾರ್ಗಸೂಚಿಯನ್ನು ಕರ್ನಾಟಕ  ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ.

2023-24ನೇ ಸಾಲಿನ ಎಸ್‌ ಎಸ್ ಎಲ್‌ ಸಿ ಪರೀಕ್ಷೆ-1ಯನ್ನು ದಿನಾಂಕ ೨೫-೦೩-೨೦೨೪ ರಿಂದ  ೦೬-೦೪-೨೦೨೪ ರವರೆಗೆ ನಡೆಸಲಾಗುತ್ತಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವುದು ಪರೀಕ್ಷಾ ಕಾರ್ಯದಲ್ಲಿ ಭಾಗಿಯಾದವರೆಲ್ಲರ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಪರೀಕ್ಷಾ ಪೂರ್ವದಲ್ಲಿ, ಪರೀಕ್ಷಾ ಸಮಯದಲ್ಲಿ ಹಾಗೂ ಪರೀಕ್ಷಾ ನಂತರದಲ್ಲಿ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ), ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ನಿರ್ವಹಿಸಬೇಕಾದ ಕರ್ತವ್ಯಗಳು ಹಾಗೂ ಜವಾಬ್ದಾರಿಗಳನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿರುವ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.

ಉಪನಿರ್ದೇಶಕರು (ಆಡಳಿತ)ರವರ ಕರ್ತವ್ಯಗಳು ಮತ್ತು ಜವಾಬ್ದಾರಿಗಳು:

ಆಯಾ ಜಿಲ್ಲೆಯಲ್ಲಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಉಪನಿರ್ದೇಶಕರು (ಆಡಳಿತ)ರವರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಮತ್ತು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪರೀಕ್ಷಾ ಅವ್ಯವಹಾರ ಹಾಗೂ ಇನ್ನಿತರೆ ಅಹಿತಕರ ಘಟನೆಗಳು ನಡೆಯದಂತೆ ನಿಗಾವಹಿಸುವುದು ಜಿಲ್ಲಾ ಉಪನಿರ್ದೇಶಕರು (ಆಡಳಿತ)ರವರ ಜವಾಬ್ದಾರಿಯಾಗಿರುತ್ತದೆ, ಅದರಂತೆ ಉಪನಿರ್ದೇಶಕರು(ಆಡಳಿತ)ರವರಿಗೆ ಈ ಕೆಳಕಂಡ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಿದೆ.

ಜಿಲ್ಲಾ ಉಪನಿರ್ದೇಶಕರು ಸಲ್ಲಿಸಿರುವ ಪರೀಕ್ಷಾ ಕೇಂದ್ರಗಳ ರಚನೆಯ ಪ್ರಸ್ತಾವನೆಗಳನ್ವಯ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತವಾದ ಪೀಠೋಪಕರಣ/ಆಸನದ ವ್ಯವಸ್ಥೆ, ಕುಡಿಯಲು ಶುದ್ಧವಾದ ನೀರು, ಶೌಚಾಲಯದಲ್ಲಿ ನೀರಿನ ಲಭ್ಯತೆ ಹಾಗೂ ಮೂಲಭೂತ ಸೌಲ ಸೌಲಭ್ಯಗಳು ಲಭ್ಯವಿರುವ ಬಗ್ಗೆ ಶಿಕ್ಷಣಾಧಿಕಾರಿಗಳು/ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿಗಳು/ವಿಷಯ ಪರಿವೀಕ್ಷಕರನ್ನು ನಿಯೋಜಿಸಿ ಖಾತರಿಪಡಿಸಿಕೊಳ್ಳುವುದು.”

ಪರೀಕ್ಷಾ ಕೇಂದ್ರದಲ್ಲಿ ಪೀಠೋಪಕರಣಗಳ ಕೊರತೆ ಇದ್ದಲ್ಲಿ ಸಂಬಂಧಿಸಿದ ಪರೀಕ್ಷಾ ಕೇಂದ್ರಕ್ಕೆ ಸಂಯೋಜಿಸಿರುವ ಶಾಲೆಗಳಿಂದ ಪಡೆಯುವುದು. ಈ ಸಂಬಂಧವಾಗಿ ಮಂಡಳಿಯಿಂದ ಯಾವುದೇ ವಿಧವಾದ ಸಾಗಾಣಿಕೆ ವೆಚ್ಚ ಹಾಗೂ ಪೀಠೋಪಕರಣಗಳ ಬಾಡಿಗೆಯನ್ನು ನೀಡಲಾಗುವುದಿಲ್ಲ. ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವುದನ್ನು ನಿಷೇಧಿಸಿದೆ.

ಪರೀಕ್ಷಾರ್ಥಿಗಳು ಯಾವುದೇ ಕಾರಣಕ್ಕೂ ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಮುಂಜಾಗ್ರತೆ ವಹಿಸುವುದು, ಸಾಮಾನ್ಯವಾಗಿ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆಗೆ ಮುಖ ಮಾಡಿಕೊಂಡು ಕುಳಿತುಕೊಳ್ಳುತ್ತಾರೆ. ಇದನ್ನು ತಪ್ಪಿಸಲು ವಿರುದ್ಧವಾಗಿ ಮುಖ ಮಾಡಿ ಕುಳಿತುಕೊಳ್ಳುವಂತೆ ಆಸನದ ವ್ಯವಸ್ಥೆಯನ್ನು ಸಜ್ಜುಗೊಳಿಸುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...