ಬೆಂಗಳೂರು : ಜೂನ್ 14ರಿಂದ ಜೂನ್ 22ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ – 2ರ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಶಾಲಾ ಮುಖ್ಯ ಶಿಕ್ಷಕರು ತಮ್ಮ ಲಾಗಿನ್ನಲ್ಲಿರುವ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ವಿದ್ಯಾರ್ಥಿಗಳಿಗೆ ವಿತರಣೆ ಮಾಡಬೇಕು. ಒಂದು ವೇಳೆ ಏನಾದರೂ ವ್ಯತ್ಯಯ ಉಂಟಾದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಮಂಡಳಿ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ.
ಉಚಿತ ಬಸ್ ಪಾಸ್
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 ರಿಂದ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕ.ರಾ.ರ.ಸಾ.ನಿಗಮ ಅನುಮತಿ ನೀಡಿದೆ.