ಬೆಂಗಳೂರು : ಇಂದಿನಿಂದ (ಜೂ.14) ಎಸ್ಎಸ್ಎಲ್ ಸಿ ಪರೀಕ್ಷೆ-2 ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕರ್ನಾಟಕದ ಎಲ್ಲಾ ಶೈಕ್ಷಣಿಕ ಜಿಲ್ಲೆಗಳ 724 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಮಂಡಳಿ ನೀಡಿರುವ ಸೂಚನೆಯಂತೆಯೇ ಪರೀಕ್ಷೆಗಳು ನಡೆಯಲಿದ್ದು. ವಿದ್ಯಾರ್ಥಿಗಳು ಸೂಚನೆಗಳನ್ನು ಪಾಲಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕ ಬಿ.ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
1) ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
2) ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
3) ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
4) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ.
5) ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
6) ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಉಚಿತ ಬಸ್ ಪಾಸ್
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 ರಿಂದ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕ.ರಾ.ರ.ಸಾ.ನಿಗಮ ಅನುಮತಿ ನೀಡಿದೆ.
ನಿರ್ಭಂದಿತ ಪ್ರದೇಶ
ಜೂ.14 ರಿಂದ 22 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು-2 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಿ ಆದೇಶಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಮುಚ್ಚಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಎಸ್ಎಸ್ಎಲ್ಸಿ ಪರೀಕ್ಷೆ-2 ರ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.