ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ.
ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದವರಿಗಾಗಿ ಹಾಗೂ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಈಬಾರಿ ಶಾಲಾ ಶಿಕ್ಷಣ ಹಾಗೂ ಪರೀಕ್ಷಾ ಮಂಡಳಿ ಮೂರು ಬಾರಿ ಪರೀಕ್ಷೆಗೆ ಅವಕಾಶ ನೀಡಿದೆ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟಗೊಂಡಿದೆ.
ಜೂನ್ 7 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಆರಂಭವಾಗಲಿದ್ದು, ಜೂನ್ 14ರವರೆಗೆ ನಡೆಯಲಿದೆ.
7-6-2024 – ಪ್ರಥಮ ಭಾಷೆ
8-6-2024 – ತೃತೀಯ ಭಾಷೆ
10-6-2024 – ಗಣಿತ, ಸಮಾಜ ಶಾಸ್ತ್ರ
11-6-2024 – ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್
12-6-2024 – ವಿಜ್ಞಾನ ಹಾಗೂ ರಾಜ್ಯಶಾಸ್ತ್ರ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
13-6-2024 – ದ್ವಿತೀಯ ಭಾಷೆ (ಇಂಗ್ಲೀಷ್, ಕನ್ನಡ)
14-6-2024 – ಸಮಾಜ ವಿಜ್ಞಾನ