alex Certify 2023-24ನೇ ಸಾಲಿನ ‘SSLC’ ಪರೀಕ್ಷೆಯಲ್ಲಿ ‘NSQF’ ಪರೀಕ್ಷಾ ಪ್ರಕ್ರಿಯೆ ಕುರಿತು ಮಾರ್ಗದರ್ಶಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2023-24ನೇ ಸಾಲಿನ ‘SSLC’ ಪರೀಕ್ಷೆಯಲ್ಲಿ ‘NSQF’ ಪರೀಕ್ಷಾ ಪ್ರಕ್ರಿಯೆ ಕುರಿತು ಮಾರ್ಗದರ್ಶಿ ಪ್ರಕಟ

ಬೆಂಗಳೂರು : 2024ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಎನ್.ಎಸ್.ಕ್ಯೂ.ಎಫ್ ವಿಷಯ ಅಳವಡಿತ ಒಟ್ಟು 267 ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲೆಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2023- 4ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಎಂದು ಹೆಸರಿಸಿ ಪರೀಕ್ಷೆಯನ್ನು ನಡೆಸಲಾಗುವುದು.

ಸದರಿ ಶಾಲೆಗಳಿಂದ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2024ರ ಎಸ್‌.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಎನ್.ಎಸ್.ಕ್ಯೂ.ಎಫ್‌ನ ಅರ್ಹ ಶಾಲಾ ವಿದ್ಯಾರ್ಥಿಗಳ (CCERF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ (CCERR) ನೋಂದಣಿಗೆ ಸಂಬಂಧಿಸಿದಂತೆ ಆಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ದಿನಾಂಕ:04.10.2023ರ ಪರೀಕ್ಷಾ ಮಾರ್ಗಸೂಚಿಯಂತೆ ಮಂಡಲಿಯು ತಿಳಿಸಿರುವ ದಿನಾಂಕದಲ್ಲಿ ಶಾಲಾ ಲಾಗಿಸ್‌ನಲ್ಲಿ ನೋಂದಣಿ ಮಾಡಲು ಕ್ರಮವಹಿಸುವುದು.

ಎನ್.ಎಸ್.ಕ್ಯೂ.ಎಫ್ ಪಠ್ಯಕ್ರಮವು ವಿದ್ಯಾರ್ಥಿಗಳನ್ನು ಪ್ರಗತಿಶೀಲರನ್ನಾಗಿಸಲು, ಸರ್ವತೋಮುಖ ಅಭಿವೃದ್ಧಿಗೆ ಪ್ರೇರೇಪಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಯೋಜನೆಯು ನಿರಂತರ ಮುಂದುವರಿಕೆ ಯೋಜನೆಯಾಗಿದ್ದು, ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಅನುಷ್ಟಾನ ಮಾಡಲು ಅವಕಾಶ ಕಲ್ಪಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶ, ಸಾಮಾನ್ಯ ಶಿಕ್ಷಣದಲ್ಲಿ ವೃತ್ತಿ ಶಿಕ್ಷಣದ ವಿಷಯಗಳನ್ನು ವಿದ್ಯಾರ್ಥಿಗಳ ಆಸಕ್ತಿಗನುಗುಣವಾಗಿ ಅಳವಡಿಸಿ ಉದ್ಯೋಗ ನಿರ್ವಹಿಸಲು ಅಗತ್ಯ ಕೌಶಲ್ಯಗಳು ಮತ್ತು ಸಾಮರ್ಥ್ಯಗಳ ಬಗ್ಗೆ ತರಬೇತಿಯನ್ನು ನೀಡುವುದಾಗಿದೆ.

ಪ್ರಾರಂಭದಿಂದ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಬ್ಯೂಟಿ ಮತ್ತು ವೆಲ್‌ನೆಸ್ ಸೆಕ್ಟಾರ್‌ಗಳನ್ನು ಈ ಯೋಜನೆಯಲ್ಲಿ ಅಳವಡಿಸಲಾಗಿದೆ. 2022-23ನೇ ಸಾಲಿನಿಂದ 9ನೇ ತರಗತಿಯಿಂದ ಅಪ್ಯಾರಲ್ಸ್, ಮೇಡ್ ಅಪ್ಸ್ & ಹೋಮ್ ಫರ್ನಿಷಿಂಗ್ ಮತ್ತು ಎಲೆಕ್ಟ್ರಾನಿಕ್ಸ್ & ಪಾರ್ಡೇ‌ ಈ ಎರಡು ಹೊಸ ಸೆಕ್ಟಾರ್‌ಗಳನ್ನು ಆಳವಡಿಸಲಾಗಿದೆ. ಆಯ್ಕೆಯಾದ ಪ್ರೌಢ ಶಾಲೆಗಳಲ್ಲಿ ಯಾವುದಾದರೂ ಎರಡು ಸೆಕ್ಟಾರ್‌ಗಳನ್ನು ಅಳವಡಿಸುವುದು ಹಾಗೂ ಪ್ರತಿ ಹಂತದ ಪ್ರತಿ ಸೆಕ್ಟಾರ್ ಗೆ ಗರಿಷ್ಠ 25 ವಿದ್ಯಾರ್ಥಿಗಳನ್ನು ದಾಖಲಿಸುವುದು, ಆಂತರಿಕ ಮೌಲ್ಯಮಾಪನಕ್ಕೆ ನಿರಂತರ ಹಾಗೂ ವ್ಯಾಪಕ ಮೌಲ್ಯಮಾಪನ(Continuous and Comprehensive Evaluation) ಪದ್ಧತಿಯನ್ನು ಅಳವಡಿಸಿಕೊಳ್ಳುವುದು. 2023-24ನೇ ಸಾಲಿನಿಂದ 10ನೇ ತರಗತಿಯ ವಿದ್ಯಾರ್ಥಿಗಳೂ ಸಹ ಮೊದಲ ಬಾರಿಗೆ ಈ ಎರಡು ಹೊಸ ಸೆಕ್ಟಾರ್ ನೊಳಗೊಂಡಂತೆ ಪರೀಕ್ಷೆಯನ್ನು ತೆಗೆದುಕೊಳ್ಳುವುದು.

ಸರ್ಕಾರದ ಆದೇಶದ ಸಂಖ್ಯೆ:ಇಡಿ.59,ಎಂ.ಸಿ.ಡಿ.2016, ದಿನಾಂಕ:16.06.2016 ರನ್ವಯ ರಾಜ್ಯದ ಆಯ್ದ ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟ್ರೀಯ ವೃತ್ತಿ ಶಿಕ್ಷಣ ಕೌಶಲ್ಯ ಚೌಕಟ್ಟು ಯೋಜನೆಯಡಿ ವೃತ್ತಿ ಶಿಕ್ಷಣ ವಿಷಯವನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಪರೀಕ್ಷಾ ಪದ್ಧತಿಯಲ್ಲಿ ಕೆಳಕಂಡ ಬದಲಾವಣೆ ಮಾಡಿಕೊಳ್ಳಲು ನಿರ್ದೇಶಕರು(ಪರೀಕ್ಷೆಗಳು), ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಮಲ್ಲೇಶ್ವರಂ, ಬೆಂಗಳೂರು ರವರಿಗೆ ಕೆಳಕಂಡ ಷರತ್ತುಗಳಂತೆ ಅನುಮತಿಸಿ ಆದೇಶಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...