
ದೊಡ್ಡಬಳ್ಳಾಪುರ: ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದ್ದು, ಕಿಡಿಗೇಡಿಗಳು ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ನಾಶ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ ನಡೆದಿದೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ.ಪರೀಕ್ಷಾ ಕೇಂದ್ರದ 10 ಕೊಠಡಿಗಳಲ್ಲಿ 14 ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಇವುಗಳಲ್ಲಿ 6 ಕ್ಯಾಮೆರಾಗಳನ್ನು ಕಿತ್ತುಹಾಕಿದ್ದಾರೆ. ಕೊಠಡಿಗಳ ಬಾಗಿಲುಗಳ ಬೀಗ ಮುರಿದು ಒಳನುಗ್ಗಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದೆ.
ಪರೀಕ್ಷಾ ಕೇಂದ್ರಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದ್ದಾರೆ.