ಬೆಂಗಳೂರು: ಜೂನ್ 14ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿರುವ ಶಾಲಾ ವಿದ್ಯಾರ್ಥಿಗಳಿಗೆ ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ಬೋಧನಾ ತರಗತಿಗಳನ್ನು ನಡೆಸಲಾಗುವುದು.
ವಿದ್ಯಾರ್ಥಿಗಳು ತಾವು ಓದಿದ ಪ್ರೌಢಶಾಲೆಗಳಿಗೆ ತೆರಳಿ ವಿಶೇಷ ತರಗತಿಗಳ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ -1ರಲ್ಲಿ ಶೇಕಡ 10ರಷ್ಟು ಕುಸಿತವಾದ ಹಿನ್ನೆಲೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 6ರವರೆಗೆ ಬೇಸಿಗೆ ರಜೆ ಅವಧಿಯಲ್ಲಿ ವಿಶೇಷ ತರಗತಿ ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದ್ದು, ಶಿಕ್ಷಕರಿಂದ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2024 -25 ನೇ ಶೈಕ್ಷಣಿಕ ಸಾಲು ಆರಂಭವಾಗುವ ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ತರಗತಿ ನಡೆಸಲು ತಿಳಿಸಲಾಗಿದೆ.