ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸುವ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಶಿಕ್ಷಣ ಇಲಾಖೆ ಮುಂದೂಡಿದ್ದು, ಮೇ 29 ರಿಂದ ಜೂನ್ 13 ರವರೆಗೆ ನಡೆಸಲಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿ ಮತ್ತು ಸಿ ಪ್ಲಸ್ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆ -2ರಲ್ಲಿ ಉತ್ತೀರ್ಣರಾಗಲು ಅನುಕೂಲವಾಗುವಂತೆ ಮೇ 15 ರಿಂದ ಜೂನ್ 5 ರವರೆಗೆ ಬೋಧನಾ ತರಗತಿ ನಡೆಸಲು ಶಿಕ್ಷಣ ಇಲಾಖೆ ಉದ್ದೇಶಿಸಿತ್ತು.
ಶಿಕ್ಷಕರ ಸಂಘ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ಪರಿಹಾರ ಬೋಧನಾ ತರಗತಿ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಜೂನ್ 14ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-2 ಆರಂಭವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.