alex Certify ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಹಾಜರಾತಿ ಕೊರತೆ ಕಾರಣ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಹೆಸರು ನೋಂದಣಿಗೆ ಮೇ 29ರಂದು ಸಂಜೆ 5:30ರ ವರೆಗೆ ಅವಕಾಶ ನೀಡಲಾಗಿದೆ.

2022 -23ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದ 26,500 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯ ಕಾರಣದಿಂದಾಗಿ ಮುಖ್ಯ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಖಾಸಗಿ ವಿದ್ಯಾರ್ಥಿಗಳಾಗಿ ಇವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು, ಹೆಸರು ನೋಂದಣಿಗೆ ಮೇ 26ರ ವರೆಗೆ ಅವಕಾಶ ನೀಡಲಾಗಿತ್ತು. ಈಗ ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿಯ ಮೇರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 29ರಂದು ಸಂಜೆವರೆಗೆ ನೋಂದಣಿ ಅವಧಿ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...