ಬೆಂಗಳೂರು: ಏಪ್ರಿಲ್ 15ರಿಂದ ಎಸ್ಎಸ್ಎಲ್ಸಿ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಸಹಾಯಕ ಮೌಲ್ಯಮಾಪಕರು ಆದೇಶ ಪ್ರತಿಯನ್ನು ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.
ಉಪ ಮುಖ್ಯ ಮೌಲ್ಯಮಾಪಕರು ಏಪ್ರಿಲ್ 13 ಹಾಗೂ ಸಹಾಯಕ ಮೌಲ್ಯಮಾಪಕರು ಏಪ್ರಿಲ್ 15 ರಿಂದ ಮೌಲ್ಯಮಾಪನಕ್ಕೆ ಹಾಜರಾಗಬೇಕಿದೆ. ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರಿಗೆ ತಮ್ಮ ಶಾಲೆಯಿಂದ ನಿಯೋಜನೆಗೊಂಡ ಉಪಮುಖ್ಯ ಮೌಲ್ಯಮಾಪಕರ, ಮತ್ತು ಸಹಾಯಕ ಮೌಲ್ಯಮಾಪಕರ ನೇಮಕಾತಿ ಆದೇಶ ಪತ್ರಗಳನ್ನು ಮಂಡಳಿ ವೆಬ್ಸೈಟ್ ನಲ್ಲಿ ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಲಾಗಿದೆ.
ಆದೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ ಸಂಬಂಧಿಸಿದ ಶಿಕ್ಷಕರಿಗೆ ವಿತರಿಸಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.