ಕಲಬುರಗಿ: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದ ನಕಲಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆಯಲಾಗಿದೆ. ಕಲ್ಬುರ್ಗಿ ನಗರದ ವಿನಾಯಕ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿಯ ಹೆಸರಲ್ಲಿ ಪರೀಕ್ಷೆ ಬರೆಯುತ್ತಿದ್ದ ಮತ್ತೊಬ್ಬ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಸಕ್ರೆಪ್ಪಗೌಡ ಭೇಟಿ ನೀಡಿದ ವೇಳೆ ಅಕ್ರಮ ಬೆಳಕಿಗೆ ಬಂದಿದೆ. ನಕಲಿ ವಿದ್ಯಾರ್ಥಿ ಕುಮಾರ್ ಪವಾರ್ ಎಂಬುವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಟೇಷನ್ ಬಜಾರ್ ಠಾಣೆ ಪೊಲೀಸರು ನಕಲಿ ಅಭ್ಯರ್ಥಿಯ ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.