ಬೆಂಗಳೂರು: ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆ ಶುಲ್ಕ ಹೆಚ್ಚಳ ಮಾಡಿಲ್ಲವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಪ್ರಸಕ್ತ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಹಿನ್ನೆಲೆಯಲ್ಲಿ ಹಿಂದಿನಂತೆಯೇ ವಿದ್ಯಾರ್ಥಿಗಳಿಗೆ ತಲಾ 60 ರೂಪಾಯಿ ಪರೀಕ್ಷಾ ಶುಲ್ಕ ಮುಂದುವರೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಮಂಡಿಸಿದ ಸೂಚನಾ ಪತ್ರಕ್ಕೆ ಸಚಿವರು ಉತ್ತರ ನೀಡಿದ್ದು, 2021 -22ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಗೆ ಪ್ರತಿ ವಿದ್ಯಾರ್ಥಿಗೆ 60 ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕ ಪಡೆದು ಪರೀಕ್ಷೆ ನಡೆಸಲಾಗಿದ್ದು, ಅದೇ ಶುಲ್ಕವನ್ನೇ ಈ ಬಾರಿಯೂ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.