ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.
ಕೊರೋನಾ ಆತಂಕದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ಕೈಗೊಂಡಿದ್ದು, ಜುಲೈ 19 ಮತ್ತು 22 ರಂದು ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಪ್ರಯಾಣದ ಸಂದರ್ಭದಲ್ಲಿ ಕಡ್ಡಾಯವಾಗಿ ಪರೀಕ್ಷೆ ಹಾಲ್ ಟಿಕೆಟ್ ತೋರಿಸಬೇಕಿದೆ.