ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ನಾಳೆ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಪರೀಕ್ಷೆಯ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ.
ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಕೊರೋನಾ ನಡುವೆಯೂ ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸುವ ಕುರಿತಂತೆ ಕೈಗೊಂಡ ಸಿದ್ಧತೆ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲನೆ ನಡೆಸಲಿದ್ದು, ದಿನಾಂಕವನ್ನು ಕೂಡ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.