
ರಾಮನಗರ: ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರು 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಕೆಂಪೇಗೌಡ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ಶಿಕ್ಷಕರಾದ ಕೃಷ್ಣಮೂರ್ತಿ, ಅರ್ಜುನ್, ನಾಗರಾಜ, ಅಲೀಂ, ಶ್ರೀನಿವಾಸ, ಲೋಕೇಶ ಸುಬ್ರಹ್ಮಣ್ಯ, ಪತ್ರಕರ್ತ ವಿಜಯ್ ಬಂಧಿತ ಆರೋಪಿಗಳಾಗಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಎಲ್ಲಾ ಪ್ರಶ್ನೆ ಪತ್ರಿಕೆಗಳನ್ನು ಇವರು ಸೋರಿಕೆ ಮಾಡಿದ್ದರು. ಪ್ರತಿದಿನ ಪರೀಕ್ಷೆ ಆರಂಭಕ್ಕೆ ಮೊದಲು ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿತ್ತು. ವಾಟ್ಸಾಪ್ ಮೂಲಕ ಪ್ರಶ್ನೆಪತ್ರಿಕೆಯನ್ನು ಬಂಧಿತರು ಸೋರಿಕೆ ಮಾಡಿದ್ದರು. ನಂತರ ಶಿಕ್ಷಕರಿಂದ ಪ್ರಶ್ನೆಗಳಿಗೆ ಉತ್ತರ ಬರೆಸಲಾಗುತ್ತಿತ್ತು. ಕೆಂಪೇಗೌಡ ಪ್ರೌಢಶಾಲೆಗೆ ಈ ಬಾರಿ ಶೇ. 100 ರಷ್ಟು ಫಲಿತಾಂಶ ಬಂದಿತ್ತು.