ಬೆಳಗಾವಿ: ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿ ಎಲ್ಲ ಸಾಮಾನ್ಯ ಸ್ಥಿತಿಗೆ ಮರಳಿದಾಗ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ಕಡಿಮೆಯಾಗದಿದ್ದರೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಕೂಡ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಮಾಹಿತಿ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿ ಸಹಜ ಸ್ಥಿತಿಗೆ ಮರಳಿ ಪರಿಸ್ಥಿತಿ ಸುಧಾರಿಸಿದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಇಲ್ಲವಾದಲ್ಲಿ ಪರೀಕ್ಷೆ ರದ್ದು ಪಡಿಸಲಾಗುವುದು. ಪರಿಸ್ಥಿತಿ ಸುಧಾರಣೆಯಾದ ನಂತರ ಎರಡು ದಿನ ಮಾತ್ರ ಪರೀಕ್ಷೆ ನಡೆಸಲಾಗುವುದು. ವಿದ್ಯಾರ್ಥಿಗಳಿಗೆ ತೊಂದರೆಯಾಗದು, ಪೋಷಕರು ಕೂಡ ಆತಂಕ, ಗೊಂದಲಕ್ಕೆ ಒಳಗಾಗಬಾರದು ಎಂದು ಸಿಎಂ ಹೇಳಿದ್ದಾರೆ.