ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಳೆ ವೆಬ್ಸೈಟ್ ನಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜೂನ್ 27 ರಿಂದ ಜುಲೈ 4ರ ವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ನಡೆದಿತ್ತು.
94669 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 37479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನೋಂದಾಯಿಸಿಕೊಂಡ ಫೋನ್ ನಂಬರ್ ಗೆ SMS ಮೂಲಕ ಫಲಿತಾಂಶ ರವಾನೆ ಮಾಡಲಾಗುವುದು. https://karresults.nic.in. ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.