ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. ಮೌಲ್ಯಮಾಪನ ಕಾರ್ಯ ಪೂರ್ಣಗೊಂಡು ವಿದ್ಯಾರ್ಥಿಗಳು ಪಡೆದ ಅಂಕಗಳ ಗಣಕೀಕರಣ ಪ್ರಕ್ರಿಯೆ ನಡೆಸಲಾಗುತ್ತಿದೆ. ಇದಕ್ಕೆ ನಾಲ್ಕೈದು ದಿನಗಳು ಬೇಕಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ 8ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಚಿಂತನೆ ನಡೆಸಿದೆ.
ಗಣಕೀಕರಣ ಕಾರ್ಯ ವಿಳಂಬವಾದಲ್ಲಿ ಒಂದೆರಡು ದಿನ ಫಲಿತಾಂಶ ತಡವಾಗಬಹುದು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆದಿತ್ತು. 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.