alex Certify BREAKING: ನಾಳೆಯೇ SSLC ಪರೀಕ್ಷಾ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಳೆಯೇ SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನಾಳೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದು ಹೇಳಲಾಗುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ರಾಜ್ಯದಲ್ಲಿ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...