ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೋಂದಾಯಿಸುವ ಕುರಿತು ಅನಧಿಕೃತ ಶಾಲೆಗಳಿಂದ ಪ್ರಸ್ತಾವನೆಗಳು ಸಲ್ಲಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.
ಅನಧಿಕೃತ ಶಾಲೆಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಮಕ್ಕಳನ್ನು ನೋಂದಾಯಿಸಿದಲ್ಲಿ ಶಿಕ್ಷಣ ಇಲಾಖೆ ಸಂಬಂಧಿಸಿದ ಜಿಲ್ಲೆಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪರೀಕ್ಷಾ ನೋಂದಣಿಗೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಹೊರಡಿಸಿದೆ. ಯಾವೊಂದು ಅನಧಿಕೃತ ಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೋಂದಾಯಿಸಲು ಪ್ರಸ್ತಾವನೆ ಸಲ್ಲಿಸದಂತೆ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.