ಬೆಂಗಳೂರು : ಮಾ.25 ರಿಂದ ಏ.06 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್ಗಳುಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ.
ಈ ಆದೇಶವು ಎಸ್ಎಸ್ಎಲ್ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್ ಆರ್ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. 4,58,427 ಬಾಲಕರು, 4,37,844 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.