
ಶಿವಮೊಗ್ಗ: ಸೋಮವಾರದಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ(14) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲವಿಠಲಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.
ಪರೀಕ್ಷೆಗೆ ಹಾಜರಾಗಲು ಗ್ರಾಮದಿಂದ ಶಿವಮೊಗ್ಗಕ್ಕೆ ತೆರಳಲು ಅವರು ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ ಚನ್ನಗಿರಿ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಇನೋವಾ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.