alex Certify ರಾಜ್ಯಾದ್ಯಂತ ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು

ಬೆಂಗಳೂರು: ರಾಜ್ಯದಾದ್ಯಂತ ಮಾರ್ಚ್ 25ರ ಸೋಮವಾರದಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ಆರಂಭವಾಗಲಿದೆ.

ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಸುಗಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ.

ಈ ಬಾರಿ 4,41,910 ಬಾಲಕರು, 4,28,058 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. 8.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ರೆಗ್ಯುಲರ್, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗಳಿಗೆ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಪ್ರತಿಯೊಂದು ತಾಲೂಕಿನ ಪರೀಕ್ಷಾ ಕೇಂದ್ರಗಳ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಉಪನಿರ್ದೇಶಕರ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಗ್ರೂಪ್ ಬಿ ವೃಂದದ ಅಧಿಕಾರಿಗಳನ್ನು ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಪರೀಕ್ಷಾ ದಿನದಂದು ಸೆಕ್ಷನ್ 144 ಕಲಂ ನ್ನು ಜಾರಿಗೊಳಿಸಿ ಪರೀಕ್ಷಾ ಕೇಂದ್ರದಗಳ ಸುತ್ತ 200 ಮೀ ಅಂತರದಲ್ಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಜಿಲ್ಲಾ ಜಾಗೃತದಳದ 3 ತಂಡಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗಿದೆ.

ಹೋಳಿ ಹಬ್ಬದ ನಿಮಿತ್ಯ ಹುಬ್ಬಳ್ಳಿಯ ಕೆಲವೊಂದು ಪ್ರದೇಶಗಳಲ್ಲಿ ಪರೀಕ್ಷಾ ದಿನಗಳಂದು ಬಣ್ಣದ ಹಬ್ಬ ಇರುವದರಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮವಹಿಸಲು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ.

ಉಚಿತ ಪ್ರಯಾಣ:

ಗ್ರಾಮೀಣ ಪ್ರದೇಶ ಮತ್ತು ಇತರೆ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳು ಪ್ರವೇಶ ಪತ್ರವನ್ನು ತೋರಿಸಿ ಉಚಿತ ಪ್ರಯಾಣ ಮಾಡಲು ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಅವಕಾಶ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...