ಬೆಂಗಳೂರು: 2025ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ -1 ಬರೆಯಲು ಹಾಜರಾಗುವ ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ನ. 20ರ ಕೊನೆಯ ದಿನವಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡು ಶುಲ್ಕ ಪಾವತಿಸಲು ನವೆಂಬರ್ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಅರ್ಹ ವಿದ್ಯಾರ್ಥಿಗಳು, ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮೂಲಕ ನೋಂದಾಯಿಸಲು ನ. 11 ರವರೆಗೆ ಗಡುವು ನೀಡಲಾಗಿತ್ತು. ಈ ಅವಧಿಯನ್ನು ನವೆಂಬರ್ 20ರವರೆಗೆ ವಿಸ್ತರಿಸಲಾಗಿದೆ. ಚಲನ್ ಮುದ್ರಿಸಿಕೊಳ್ಳಲು ನವೆಂಬರ್ 26, ಬ್ಯಾಂಕಿನಲ್ಲಿ ಶುಲ್ಕ ಪಾವತಿಸಲು ನವೆಂಬರ್ 30ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.