ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆಯು ಇದೇ ಜುಲೈ 19 ಹಾಗೂ 22 ರಂದು ಜರುಗಲಿದೆ.
ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-2ರ ಸಂಸ್ಥೆಯಿಂದ ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು (ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ) ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಿಬರಲು ಉಚಿತವಾಗಿ ಬಸ್‍ಗಳಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು(ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಪರೀಕ್ಷಾ ಕೇಂದ್ರದಿಂದ ಹಿಂತಿರುಗುವಾಗ) ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಇದರ ಸದುಪಯೊಗ ಪಡೆಯಬೇಕೆಂದು ಕಲಬುರಗಿ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.