ಬೆಂಗಳೂರು: 2023 ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಜೂನ್ 12ರ ನಾಳೆಯಿಂದ ಜೂನ್ 19ರ ವರೆಗೆ ನಡೆಯಲಿದೆ.
ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ರಾಜ್ಯದಾದ್ಯಂತ 458 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ನಡೆಯಲಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಕೈಗೊಂಡಿದೆ.
11.810 ಪ್ರೌಢಶಾಲೆಗಳಿಂದ 1,11,689 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.