ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ಮಾರ್ಚ್ 31 ರಿಂದ ಆರಂಭವಾಗಲಿದೆ.
ಪರೀಕ್ಷೆಗೆ 5833 ಸರ್ಕಾರಿ ಶಾಲೆ, 3,605 ಅನುದಾನಿತ 6060 ಅನುದಾನ ರಹಿತ ಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 3305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಸರ್ಕಾರಿ ಶಾಲೆಗಳ 3.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅನುದಾನಿತ ಶಾಲೆಗಳ 2.20 ಲಕ್ಷ ಹಾಗೂ ಅನುದಾನ ರಹಿತ ಶಾಲೆಗಳ 2.61 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಮಾರ್ಚ್ 31 ರಂದು ನಾಳೆ ಪ್ರಥಮ ಭಾಷೆ ಕನ್ನಡ, ಹಿಂದಿ, ತೆಲುಗು, ಮರಾಠಿ, ಉರ್ದು, ಸಂಸ್ಕೃತ, ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ವಾಚ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.