
ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.
ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು ಶಾಲೆಗಳು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬಹುದಾಗಿದೆ. ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಲ್ಲಾ ವಿದ್ಯಾರ್ಥಿಗಳಂತೆಯೇ 2022 -23 ನೇ ಸಾಲಿನಲ್ಲಿ ಕಾಲೇಜುಗಳಿಗೆ ಪ್ರವೇಶ ಪಡೆಯಬಹುದಾಗಿದೆ.