ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2 ನೋಂದಣಿ ಅವಧಿಯನ್ನು ಮೇ 21ರ ವರೆಗೆ ವಿಸ್ತರಿಸಲಾಗಿದೆ ಪುನರಾವರ್ತಿತ ಎಸ್ಎಸ್ಎಲ್ಸಿ ಪರೀಕ್ಷೆ -2 ಬರೆಯಲಿಚ್ಚಿಸುವ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೇ 21ರ ವರೆಗೆ ನೋಂದಣಿ ದಿನಾಂಕ ವಿಸ್ತರಿಸಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ಮೇ 24, ಚಲನ್ ಮುದ್ರಿಸಿಕೊಂಡು ಬ್ಯಾಂಕ್ ಖಾತೆಗೆ ಶುಲ್ಕ ಪಾವತಿಸಲು ಮೇ 27 ಕೊನೆಯ ದಿನವಾಗಿದೆ.