ಬೆಂಗಳೂರು: ಮಾರ್ಚ್ ತಿಂಗಳಲ್ಲೇ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಕೊಡುತ್ತೇವೆ. ಒಂದರಿಂದ 9 ನೇ ತರಗತಿಯವರೆಗೆ ವಿದ್ಯಾಗಮ ಆಧಾರದಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾಗಮ ತರಗತಿಯನ್ನು ಆಧರಿಸಿ ಪರೀಕ್ಷೆ ನಡೆಸುವ ಚಿಂತನೆ ಇದೆ. ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.