ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಇಂದು ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಭವಿಷ್ಯ ನಿರ್ಧಾರವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಬೆಳಗ್ಗೆ 10 ಗಂಟೆಗೆ ಅಧಿಕಾರಿಗಳ ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗ್ತಿದೆ. ಹೀಗಾಗಿ ನಿಗದಿಯಾದ ದಿನಾಂಕದಲ್ಲಿ ಪರೀಕ್ಷೆ ನಡೆಸುವ ಕುರಿತು ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.
ಕೋವಿಡ್ ಹೆಚ್ಚಳದ ಕಾರಣ ಪರೀಕ್ಷೆ ಮುಂದೂಡಬೇಕೆ ಅಥವಾ ನಿಗದಿಯಂತೆಯೇ ನಡೆಸಬೇಕೆ ಎಂಬುದರ ಬಗ್ಗೆ ಚರ್ಚೆ ನಡೆಸಿ ಇಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗಾಗಲೇ ಸಿಬಿಎಸ್ಇ, ಐಸಿಎಸ್ಇ ಸೇರಿ ಅನೇಕ ರಾಜ್ಯಗಳಲ್ಲಿ 10 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಲಾಗಿದೆ.