ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಸಿಬ್ಬಂದಿ ಮತ್ತು ಶಿಕ್ಷಕರ ಕರ್ತವ್ಯ ಮತ್ತು ಜವಾಬ್ದಾರಿ ಮಾರ್ಗಸೂಚಿ ನೀಡಲಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಸಿಬ್ಬಂದಿ ಮತ್ತು ಶಿಕ್ಷಕರ ಜವಾಬ್ದಾರಿ ಕುರಿತಾಗಿ ಸುತ್ತೋಲೆ ಹೊರಡಿಸಲಾಗಿದೆ. ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದೆ. ಆರು ಅಡಿಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ಕೊಠಡಿಗೆ 12 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. 100 ಜನರಿಗೆ ಸೀಮಿತವಾದ ಪರೀಕ್ಷಾ ಕೇಂದ್ರವನ್ನು ರಚನೆ ಮಾಡಲಾಗುವುದು. ಜಿಲ್ಲಾಮಟ್ಟದಲ್ಲಿ ನಿರ್ದೇಶಕರು ಮಾಡಿಕೊಳ್ಳಬೇಕಾದ ಸಿದ್ಧತೆ ಕುರಿತು ಪರೀಕ್ಷೆ ಮಂಡಳಿಯಿಂದ ಸುತ್ತೋಲೆ ನೀಡಲಾಗಿದೆ ಎನ್ನಲಾಗಿದೆ.