
ಬೆಂಗಳೂರು: ರಾಜ್ಯಾದ್ಯಂತ ಶನಿವಾರ ಎಸ್ಎಸ್ಎಲ್ಸಿ ವಿಜ್ಞಾನ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಒಬ್ಬ ವಿದ್ಯಾರ್ಥಿ ಡಿಬಾರ್ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯಲೋಪ ಎಸಗಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಆದರ್ಶ ವಿದ್ಯಾಲಯ ಕೇಂದ್ರದಲ್ಲಿ ವಿಜ್ಞಾನ ವಿಷಯ ಪರೀಕ್ಷೆ ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಪರೀಕ್ಷಾ ಅಕ್ರಮಕ್ಕೆ ಸಹಕರಿಸಿದ ಆರೋಪದ ಮೇಲೆ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಪರೀಕ್ಷೆಗೆ ನೋಂದಾಯಿಸಿದ್ದ 8.56 ಲಕ್ಷ ವಿದ್ಯಾರ್ಥಿಗಳಲ್ಲಿ 8.41 ಲಕ್ಷ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಪರೀಕ್ಷೆಗೆ ಹಾಜರಾಗಿದ್ದಾರೆ. 15,311 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.