ಬೆಂಗಳೂರು: ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2022 -23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 31 ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಏಪ್ರಿಲ್ 3 ರಂದು ಕೋರ್ ಸಬ್ಜೆಕ್ಟ್ ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಪರೀಕ್ಷೆ ನಡೆಯಲಿದೆ.
ಏಪ್ರಿಲ್ 8ರಂದು ಕೋರ್ ಸಬ್ಜೆಕ್ಟ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪರೀಕ್ಷೆಗಳು ಹಾಗೂ ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 12ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.