ಬೆಂಗಳೂರು: ಜುಲೈ ಅಂತ್ಯದಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ಸೈಟ್ ನಲ್ಲಿ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆ ಸರಳಗೊಳಿಸಿ ಎರಡು ದಿನಗಳಿಗೆ ಸೀಮಿತವಾಗುವಂತೆ ಬಹುಆಯ್ಕೆ ಮಾದರಿ ಪ್ರಶ್ನೆಗಳ ಆಧಾರದಲ್ಲಿ ಪರೀಕ್ಷೆ ನಡೆಸಲಾಗುವುದು.
ಪ್ರತಿ ವಿಷಯಕ್ಕೆ 40 ಅಂಕಗಳಂತೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆ ಮತ್ತು ಉತ್ತರಗಳನ್ನು ಶೇಡ್ ಮಾಡಲು ಒಎಂಆರ್ ಶೀಟ್ ಮಾದರಿ ನೀಡಲಾಗಿದೆ.
ಶಾಲೆಗಳ ಮುಖ್ಯ ಶಿಕ್ಷಕರು ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಲು ಅನುಕೂಲವಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಹೇಳಲಾಗಿದೆ.
ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕೂಡ ಪ್ರಕಟಿಸಲಾಗುವುದು. ವಿವರಗಳಿಗೆ www.SSLC.karnataka.gov.in ಗಮನಿಸಬಹುದಾಗಿದೆ ಎನ್ನಲಾಗಿದೆ.