ಬೆಂಗಳೂರು: ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ಮುಂದಿನ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅಧಿಕರಿಗಳ ಸಭೆ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮyya ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ಮುಂದಿನವರ್ಷದಿಂದ ರದ್ದು ಮಾಡಬೇಕು ಎಂದು ಖಡಕ್ ಆಗಿ ಸೂಚಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಈವರ್ಷ ಗ್ರೇಸ್ ಮಾರ್ಕ್ಸ್ ನೀಡಲು ಕಾರಣವೇನು? ಯಾವ ಉದ್ದೇಶಕ್ಕೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದೀರಿ? ಯಾರು ಹೇಳಿದ್ದು? ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಿಎಂ ತರಾಟೆಗೆ ತೆಗೆದುಕೊಂಡರು.
ವಿದ್ಯಾರ್ಥಿಗಳು ಅವರ ಅರ್ಹತೆ ಮೇಲೆ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗುವುದಿಲ್ಲವೇ? ಎಂದು ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ಈ ವೇಳೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕೋವಿಡ್ ಸಂದರ್ಭದಲ್ಲಿ 5-10 ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದೆವು ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ ಈಗ ಕೋವಿಡ್ ಇದೆಯೇನ್ರೀ? ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು ಮಾಡಬೇಕು ಎಂದು ಸೂಚಿಸಿದರು.