alex Certify SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 17 ರಂದು ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆವರೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತುಮಕೂರು ರಸ್ತೆ, ಬೆಂಗಳೂರು -560 022(ಮಾಡರ್ನ್ ಬ್ರೆಡ್ ಫ್ಯಾಕ್ಟರಿ ಹಿಂಭಾಗ) ಇಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಬಿಇ ಮೆಕ್ಯಾನಿಕಲ್ ವಿದ್ಯಾರ್ಹತೆ ಹೊಂದಿರುವ  26 ವರ್ಷಗಳ  ವಯೋಮಿತಿಯೊಳಗಿರುವ ಅಭ್ಯರ್ಥಿಗಳು  ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ ಹಾಗೂ ಸ್ವ-ವಿವರಗಳೊಂದಿಗೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಏಷ್ಯಾಟಿಕ್ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು – 560009 ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...