ಬೆಂಗಳೂರು: ಜನವರಿ 1 ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.
ಜನವರಿ 1 ರಿಂದ ವಿದ್ಯಾಗಮ ಯೋಜನೆಯಡಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಕೊರೋನಾ ಮಾರ್ಗಸೂಚಿಯೊಂದಿಗೆ ವಿದ್ಯಾಗಮ ಯೋಜನೆಯಡಿ ಶಾಲೆ ಆವರಣದಲ್ಲಿ ತರಗತಿಗಳನ್ನು ಆರಂಭಿಸಲು ಕ್ರಮಕೈಗೊಳ್ಳಲಾಗಿದೆ.
ಅದೇ ರೀತಿ ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ವಾರ್ಷಿಕ ಪರೀಕ್ಷೆ ಕಾರಣಕ್ಕೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆದಿದ್ದು ಸಿಎಂ ಜೊತೆ ಸಭೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.