alex Certify ಬಿಗ್ ನ್ಯೂಸ್: ಜನವರಿ 1 ರಿಂದ SSLC, ಪಿಯುಸಿ ತರಗತಿ ಆರಂಭ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಜನವರಿ 1 ರಿಂದ SSLC, ಪಿಯುಸಿ ತರಗತಿ ಆರಂಭ ಸಾಧ್ಯತೆ

ಬೆಂಗಳೂರು: ಜನವರಿ 1 ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.

ಜನವರಿ 1 ರಿಂದ ವಿದ್ಯಾಗಮ ಯೋಜನೆಯಡಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಕೊರೋನಾ ಮಾರ್ಗಸೂಚಿಯೊಂದಿಗೆ ವಿದ್ಯಾಗಮ ಯೋಜನೆಯಡಿ ಶಾಲೆ ಆವರಣದಲ್ಲಿ ತರಗತಿಗಳನ್ನು ಆರಂಭಿಸಲು ಕ್ರಮಕೈಗೊಳ್ಳಲಾಗಿದೆ.

ಅದೇ ರೀತಿ ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ವಾರ್ಷಿಕ ಪರೀಕ್ಷೆ ಕಾರಣಕ್ಕೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆದಿದ್ದು ಸಿಎಂ ಜೊತೆ ಸಭೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...