ಬೆಂಗಳೂರು: ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ನೀಡಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಕುರಿತು ಸೂಚನೆ ನೀಡಿದ್ದು, ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ನೀಡಬೇಕೆಂದು ಹೇಳಲಾಗಿದೆ.
ಈ ಮೊದಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ನೀಡಲು ಆದೇಶಿಸಲಾಗಿತ್ತು. ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯಿಂದಲೇ ಸಿದ್ದಪಡಿಸಿ ನೀಡಲು ಕ್ರಮ ಕೈಗೊಳ್ಳುವಂತೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಎಸ್.ಎಸ್.ಎಲ್.ಸಿ. ಪ್ರಿಪರೇಟರಿ ಪರೀಕ್ಷೆಗೂ ಬೋರ್ಡ್ ನಿಂದಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ನೀಡಲಾಗುವುದು ಎಂದು ಹೇಳಲಾಗಿದೆ.