ಬೆಂಗಳೂರು : ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡಾಯವಾಗಿರಬೇಕು. 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ, ಪರೀಕ್ಷೆ ಬರೆಯಲು ಅರ್ಹರಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಇವರ ಪ್ರಸ್ತಾವನೆಯಲ್ಲಿ 2023-24 ನೇ ಶೈಕ್ಷಣಿಕ ಸಾಲಿನಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಪ್ರಸ್ತುತ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹೆಚ್ಚು, ಒತ್ತಡ ಮತ್ತು ಆತಂಕವನ್ನು ಸೃಷ್ಟಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಅರ್ಥಪೂರ್ಣ ಕಲಿಕೆ ಮತ್ತು ಶೈಕ್ಷಣಿಕ ಪ್ರಗತಿಯು ಕುಂಠಿತವಾಗುತ್ತಿರುವುದನ್ನು ಸರ್ಕಾರವು ಮನಗಂಡಿರುತ್ತದೆ. ಪ್ರಸ್ತುತ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳಿಂದ ತಪ್ತರಾಗದಿದ್ದಲ್ಲಿ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದ್ದು ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿಯ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿ ಸ್ನೇಹಿಯಾಗಿಲ್ಲದಿರುವುದನ್ನು ಗಮನಿಸಲಾಗಿದೆ. ಏಕೆಂದರೆ ಎರಡು ಪರೀಕ್ಷೆಗಳಲ್ಲಿ ತನ್ನ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗೆ ಯಾವುದೇ ಆಯ, ಇರುವುದಿಲ್ಲ ಪರೀಕ್ಷಾ ಪದ್ಮತಿಯಲ್ಲಿ ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿದಲ್ಲಿ 1.2 ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿದಂತಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳ ಮುಂದಿನ ವ್ಯಾಸಂಗ ಮತ್ತು ಉದ್ಯೋಗಕ್ಕೆ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಅವಕಾಶ ಒದಗಿಸಿದಂತಾಗುತ್ತದೆ. ಅಲ್ಲದ, ವಿದ್ಯಾರ್ಥಿಗಳ ವೇಗ ಮತ್ತು ಶೈಲಿಯು ವಿಭಿನ್ನವಾಗಿದ್ದು, 1, 2, ಮತ್ತು 3ನೇ ಪರೀಕ್ಷೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳು ಅವರ ಕಲಿಕೆಯ ವೇಗಕ್ಕೆ ಹೊಂದಿಕೊಳ್ಳಲು ಮತ್ತು ಸಮಯ ನಿರ್ಬಂಧಗಳಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪೂರಕ ಪರೀಕ್ಷೆ’ ಎಂಬ ಹೆಸರಿನ ಬದಲಿಗೆ ವಾರ್ಷಿಕ ಪರೀಕ್ಷೆ 1, 2 ಮತ್ತು 3 ಎಂದು ಹೆಸರಿಸಿ ಮೂರು ಅವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಯ ಒಟ್ಟಾರ ಕಾರ್ಯಕ್ರಮತ ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸುವುದು ಪರೀಕ್ಷಾ ಬದಲಾವಣಿಯ ಉದ್ದೇಶವಾಗಿರುತ್ತದೆ. ಈ ಮೂರು ಪರೀಕ್ಷೆಗಳಲ್ಲಿ ವಿಷಯ ಮತ್ತು ಕಠಿಣತೆಯ ಮಟ್ಟದಲ್ಲಿ ಏಕರೂಪತೆಯನ್ನು ಕಾಯ್ದುಕೊಂಡು ವಿದ್ಯಾರ್ಥಿಗಳು ಈ ಮೂರು ಪ್ರಯತ್ನಗಳಲ್ಲಿ ಗಳಿಸಿದ ಅಂಕಗಳಲ್ಲಿ ವಿಷಯವಾರು ಅತ್ಯುತ್ತಮವಾದುದನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲು ಉದೇಶಿಸಲಾಗಿದೆ.