ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷವೂ ಕೃಪಾಂಕ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಕ ನೀಡಲಾಗುತ್ತದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇಕಡ 5ರಷ್ಟು ಕೃಪಾಕ ನೀಡಲಾಗುವುದು.

ಕೊರೊನಾ ಕಾರಣದಿಂದಾಗಿ ಕಲಿಕೆಯ ಮೇಲೆ ಉಂಟಾದ ಪರಿಣಾಮದಿಂದ ಮಕ್ಕಳು ಇನ್ನು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಎಸ್ಎಸ್ಎಲ್ಸಿಯಲ್ಲಿ 6 ವಿಷಯಗಳ ಪೈಕಿ 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ ಉಳಿದ ಮೂರು ವಿಷಯಗಳಲ್ಲಿ ಗರಿಷ್ಠ 26 ಅಂಕಗಳು ದೊರೆಯುತ್ತವೆ. ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 210 ಅಂಕ ಪಡೆದವರಿಗೆ ಎರಡು ವಿಷಯಗಳಲ್ಲಿ ಅಂದರೆ ತಲಾ 5 ಅಂಕ ಸೇರಿ ಗರಿಷ್ಠ 10 ಅಂಕ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10 ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇಕಡ 5ರಷ್ಟು ಕೃಪಾಂಕಗಳನ್ನು ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದೆ ಎಂದು ಹೇಳಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ 2020ರಲ್ಲಿ ಪರೀಕ್ಷೆ ನಡೆದಿರಲಿಲ್ಲ. 2021 ರಲ್ಲಿ ಎಲ್ಲರನ್ನು ಪಾಸ್ ಮಾಡಲಾಗಿತ್ತು. 2022ರಲ್ಲಿ ಶೇಕಡ 10ರಷ್ಟು ಕೃಪಾಂಕ ನೀಡಲಾಗಿತ್ತು. ಈ ವರ್ಷವೂ ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read