ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯೇ ಬಹುತೇಕ ಅಂತಿಮವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗ ಪ್ರಕಟಿಸಲಾದ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಬಹುತೇಕ ಅಂತಿಮವಾಗಲಿದೆ. ತಾತ್ಕಾಲಿಕ ವೇಳಾಪಟ್ಟಿಗೆ ಹೆಚ್ಚು ಮನವಿಗಳು ಬಂದಿಲ್ಲ. ಈಗಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಶಾಲೆಗಳಲ್ಲಿ ಈಗಾಗಲೇ ಶೇಕಡ 70 ರಷ್ಟು ಪಠ್ಯ ಬೋಧಿಸಲಾಗುತ್ತಿದೆ. ಉಳಿದ ಶೇಕಡ 30ರಷ್ಟು ಪಠ್ಯವನ್ನು ಬೋಧಿಸಲು ಸೂಚನೆ ನೀಡಲಾಗಿದೆ. ಕೊರೋನಾ ನಡುವೆ ಎಸ್ಎಸ್ಎಲ್ಸಿ ಪಿಯುಸಿ ತರಗತಿ ನಡೆಯುತ್ತಿವೆ. ಅಂದುಕೊಂಡಂತೆ ಎಲ್ಲಾ ಪಠ್ಯಕ್ರಮ ಪೂರ್ಣಗೊಳಿಸಿದರೆ, ತಾತ್ಕಾಲಿಕ ವೇಳಾಪಟ್ಟಿಯನ್ನು ಅಂತಿಮ ಮಾಡುವ ಸಾಧ್ಯತೆ ಇದೆ.
ಫೆಬ್ರವರಿ 1 ರವರೆಗೆ ತಕರಾರು ಸಲ್ಲಿಸಲು ಅವಕಾಶವಿದೆ. ಇದುವರೆಗೆ ಕೇವಲ 150 ಜನರಿಂದ ಮಾತ್ರ ಮನವಿಗಳು ಬಂದಿವೆ. ಕೊನೆಯ ಹಂತದಲ್ಲಿ ಸಣ್ಣಪುಟ್ಟ ಬದಲಾವಣೆಗಳಿರುತ್ತವೆ. ಅದನ್ನು ಹೊರತುಪಡಿಸಿ ಯಾವುದೇ ಬದಲಾವಣೆ ಆಗುವುದಿಲ್ಲ. ಹೀಗಾಗಿ ತಾತ್ಕಾಲಿಕ ವೇಳಾಪಟ್ಟಿಯೇ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಕಳೆದ ವರ್ಷದ ರೀತಿ ಬಹು ಆಯ್ಕೆಯ ಪ್ರಶ್ನೆ ಇರುವುದಿಲ್ಲ. ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ಇರುವುದಿಲ್ಲ. ಸೋಂಕು ಹೆಚ್ಚಾದರೂ ಕೂಡ ಅಗತ್ಯ ಕ್ರಮಗಳನ್ನು ಪಾಲಿಸಿ ಪರೀಕ್ಷೆ ನಡೆಸಲಾಗುತ್ತದೆ ಎನ್ನಲಾಗಿದೆ.
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ